ದೇಶ- ವಿದೇಶ

ಪ್ರಧಾನಿ ಮೋದಿ ಭೇಟಿಯಾದ ಬಿ.ವೈ.ವಿಜಯೇಂದ್ರ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರ್ಶೀವಾದ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದಿದ್ದಾರೆ.

ಮೋದಿ ಅವರ ಆಶೀರ್ವಾದ ಮತ್ತು ಮಾರ್ಗದರ್ಶನದಂತೆ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಅವರು ಹೇಳಿದಂತಹ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಹೇಳಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಪ್ರಧಾನಿಗಳು ಸೂಚಿಸಿದರು. ಅಲ್ಲದೇ ಪ್ರಧಾನಿ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

10 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

40 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

1 hour ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago