Mysore
25
scattered clouds

Social Media

ಸೋಮವಾರ, 26 ಜನವರಿ 2026
Light
Dark

ಪಾಕ್‌ ಪ್ರಧಾನಿ ಎದುರಲ್ಲೇ ಪಹಲ್ಗಾಮ್‌ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ

PM Modi

ತಿಯಾನ್‌ಜಿನ್‌ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್‌ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.

ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಯಾಮ್‌ನಲ್ಲಿ ನಡೆದ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಮಾನವೀಯತೆಯ ಮೇಲೆ ನಂಬಿಕೆಯನ್ನಿಡುವ ದೇಶಗಳಿಗೂ ಬಹಿರಂಗ ಸವಾಲಾಗಿತ್ತು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಭಯೋತ್ಪಾದನೆ ವಿರುದ್ಧ ದ್ವಂದ ನೀತಿ, ನಿಲುವುಗಳನ್ನು ಎಲ್ಲರೂ ಒಮ್ಮತದಿಂದ ತಿರಸ್ಕರಿಸಬೇಕು. ಇದು ಮಾನವೀಯತೆಯತ್ತ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವುದನ್ನು ಒಪ್ಪಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೆಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.

ಭಾರತ ಕಳೆದ ನಾಲ್ಕು ದಶಕಗಳಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ. ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅನೇಕ ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ . ಭಯೋತ್ಪಾದನೆ ಎದುರಿಸುವಲ್ಲಿ ದ್ವಂದ ನೀತಿ ಇರಬಾರದು. ನಾವೆಲ್ಲರೂ ಸ್ಪಷ್ಟ ಹಾಗೂ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:
error: Content is protected !!