PM Modi
ತಿಯಾನ್‌ಜಿನ್ : ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.
ತಿಯಾನ್‌ಜಿನ್‌ನಲ್ಲಿ ನಡೆಯುತ್ತಿರುವ ಎಸ್‌ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಯಾಮ್‌ನಲ್ಲಿ ನಡೆದ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಮಾನವೀಯತೆಯ ಮೇಲೆ ನಂಬಿಕೆಯನ್ನಿಡುವ ದೇಶಗಳಿಗೂ ಬಹಿರಂಗ ಸವಾಲಾಗಿತ್ತು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಭಯೋತ್ಪಾದನೆ ವಿರುದ್ಧ ದ್ವಂದ ನೀತಿ, ನಿಲುವುಗಳನ್ನು ಎಲ್ಲರೂ ಒಮ್ಮತದಿಂದ ತಿರಸ್ಕರಿಸಬೇಕು. ಇದು ಮಾನವೀಯತೆಯತ್ತ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವುದನ್ನು ಒಪ್ಪಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೆಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
ಭಾರತ ಕಳೆದ ನಾಲ್ಕು ದಶಕಗಳಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ. ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅನೇಕ ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ . ಭಯೋತ್ಪಾದನೆ ಎದುರಿಸುವಲ್ಲಿ ದ್ವಂದ ನೀತಿ ಇರಬಾರದು. ನಾವೆಲ್ಲರೂ ಸ್ಪಷ್ಟ ಹಾಗೂ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…
ಬೆಂಗಳೂರು : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ…
ಬೆಂಗಳೂರು : ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ…