ದೇಶ- ವಿದೇಶ

ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21) ಆಯೋಜಿಸಿದ್ದ ಸ್ಕೂಲ್‌ ಆಫ್‌ ಅಲ್ಟಿಮೇಟ್‌ ಲೀಡರ್‌ಶಿಪ್‌ ಕಾನ್‌ಕ್ಲೈವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರೀಕರ ಅಭಿವೃದ್ಧಿ ಅಗತ್ಯ. ಪ್ರಜೆಗಳಿಂದ ಜಗತ್ತು ನಿರ್ಮಾಣವಾಗುತ್ತದೆ. ಅಂತೆಯೇ ವೈಯಕ್ತಿಕ ಅಭಿವೃದ್ಧಿಯ ಮೂಲಕ ರಾಷ್ಟ್ರದ ಯಾವುದೇ ಎತ್ತರವನ್ನು ಸಾಧಿಸಬಹುದು. ಉತ್ತಮ ನಾಯಕರ ಅಭಿವೃದ್ಧಿ ಅಗತ್ಯವಾಗಿದೆ. ಹೀಗಾಗಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್‌ಶಿಪ್ ಸ್ಥಾಪನೆಯು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಿದರು.

ಭಾರತವನ್ನು ಸ್ವಾಮಿ ವಿವೇಕಾನಂದರು ಗುಲಾಮಗಿರಿಯಿಂದ ಹೊರತರಲು ಬಯಸಿದ್ದರರು. ಅವರಿಗೆ 100 ನಾಯಕರು ಇದ್ದರೆ ಸಾಕು, ಈ ಭಾರತಕ್ಕೆ ಸ್ವಾತಂತ್ರ್ಯ ನೀಡುವುದಲ್ಲದೇ, ಜಗತ್ತಿನಲ್ಲೇ ನಂಬರ್‌ ಒನ್‌ ದೇಶವನ್ನಾಗಿ ಮಾಡಬಹುದು ಎಂದು ನಂಬಿದ್ದರು. ನಾವೆಲ್ಲರೂ ಈ ಮಂತ್ರದೊಂದಿಗೆ ಮುಂದುವಿಯಬೇಕು ಎಂದರು.

ಇನ್ನು ಮುಂದಿನ ದಿನಗಳಲ್ಲಿ ಭಾತದ ಪ್ರಭಾವವೂ ಎಲ್ಲಾ ವಲಯಗಳಲ್ಲಿ ಅನೇಕ ಪಟ್ಟು ಅಧಿಕವಾಗುತ್ತದೆ. ಒಂದು ರೀತಿಯಲ್ಲಿ ಭಾರತದ ಸಂಪೂರ್ಣ ದೃಷ್ಟಿಕೋನ ಹಾಗೂ ವಿಷ್ಯವು ಬಲವಾದ ನಾಯಕತ್ವ ಪೀಳಿಗೆಯ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

60 mins ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

2 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

3 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

3 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

3 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

3 hours ago