ಗುಜರಾತ್: ಇಂದು ದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಜೊತೆಗೆ ಗುಜರಾತ್ ನ ಎಲ್ಲಾ 25 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಅಹಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಲು ಆಗಮಿಸುತ್ತಿದ್ದಂತೆ ಜನರು ಮೋದಿ ಹೆಸರಿನ ಉದ್ಘೋಷ ಕೂಗಿದರು. ಮತದಾನ ಮಾಡಲು ಬಂದ ಪ್ರಧಾನಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಥ್ ನೀಡಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನಿ, ಮತದಾನ ಎಂಬುದು ದಾನಗಳಲ್ಲಿಯೇ ಶ್ರೇಷ್ಠವಾದ ದಾನವಾಗಿದೆ. ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕನ್ನು ಪ್ರತಿಪಾದಿಸಬೇಕು ಎಂದು ಮನವಿ ಮಾಡಿದರು.
ಮತದಾನ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಭಿನಂದನೆಗಳು. ಚುನಾವಣಾ ಪ್ರಚಾರ ಸಕ್ರಿಯಗೊಳಿಸಲು ಹಗಲು-ರಾತ್ರಿ ಎನ್ನದೇ ಮಾಧ್ಯಮಗಳು ಸುದ್ದಿ ಪ್ರಚಾರ ಮಾಡಿದ್ದಾರೆ. ಬಿಸಿಲಿನ ಬೇಗೆ ಜಾಸ್ತಿಯಿದ್ದು, ಎಲ್ಲರೂ ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸಿ, ಈ ವೇಳೆಯಲ್ಲಿ ಹೆಚ್ಚಿನ ನೀರು ಕುಡಿಯಿರಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು.
ಜತೆಗೆ ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಹೆಚ್ಚಿನ ಮತದಾನ ಮಾಡುವಂತೆ ಪಿಎಂ ಮೋದಿ ಅವರು, ಕನ್ನಡದಲ್ಲಿ ಟ್ವೀಟ್ ಮಾಡಿ ಮತದಾನಕ್ಕೆ ಹುರಿದುಂಬಿಸಿದ್ದಾರೆ.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…