ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಜತೆ ದೂರವಾಣಿ ಮೂಲಕ ಮಾತನಾಡಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದ್ದೇನೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿ ತರಲಿದೆ ಎಂದು ನಾವು ಆಶಿಸುತ್ತೇವೆ” ಎಂಬುದಾಗಿ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇರಾನ್‌ನ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಇತ್ತೀಚೆಗೆ ನಡೆದ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಒಡ್ಡುವ ಮತ್ತು ಜಾಗತಿಕ ಪೂರೈಕೆ ಸರಪಳಿಗೆ ಅಡ್ಡಿಪಡಿಸುವ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸುತ್ತೇನೆ ಎಂದು ಹೇಳಿದರು.
ಜಾಗತಿಕ ವ್ಯಾಪಾರದ ಅಡೆತಡೆಯಿಲ್ಲದ ಚಲನೆಯನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸಂಚಾರ ಸ್ವಾತಂತ್ರ್ಯವನ್ನು ರಕ್ಷಿಸುವ ಮತ್ತು ಹಡಗು ಮಾರ್ಗಗಳು ಮುಕ್ತ ಮತ್ತು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಅವರು ಪುನರುಚ್ಚರಿಸಿದರು. ಇರಾನ್‌ನಲ್ಲಿರುವ ಭಾರತೀಯರ ಸುರಕ್ಷತೆಗೆ ಕ್ರಮ ಕೈಗೊಂಡಿರುವ ಅಲ್ಲಿನ ಸರ್ಕಾರದ ಕ್ರಮವನ್ನು ಮೋದಿ ಶ್ಲಾಘಿಸಿದರು. ಫೆಬ್ರವರಿ 28ರಂದು ಯುದ್ಧ ಆರಂಭವಾದ ಬಳಿಕ ನರೇಂದ್ರ ಮೋದಿ ಮತ್ತು ಡಾ. ಮಸೂದ್ ಪೆಜೆಶ್ಕಿಯನ್ ಮಾತನಾಡುತ್ತಿರುವುದು ಇದು 2ನೇ ಬಾರಿ.
ಈ ತಿಂಗಳ ಆರಂಭದಲ್ಲಿ ಈ ಇಬ್ಬರು ನಾಯಕರು ಮಾತುಕತೆ ನಡೆಸಿದ್ದರು. ಈ ವೇಳೆ ಪಶ್ಚಿಮ ಏಷ್ಯಾದಲ್ಲಿನ ಗಂಭೀರ ಪರಿಸ್ಥಿತಿ ಕುರಿತು ಚರ್ಚಿಸಿದ್ದಾಗಿ ಮೋದಿ ಹೇಳಿದ್ದರು. ಉದ್ವಿಗ್ನ ಪರಿಸ್ಥಿತಿ, ನಾಗರಿಕರ ಜೀವಹಾನಿ ಹಾಗೂ ಮೂಲಸೌಕರ್ಯಕ್ಕೆ ಹಾನಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಜತೆಗೆ ಭಾರತೀಯ ಸುರಕ್ಷತೆ ಬಗ್ಗೆಯೂ ಮೋದಿ ಧ್ವನಿಗೂಡಿಸಿದ್ದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…