ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ.
ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್.31ರಿಂದ ಸೆಪ್ಟೆಂಬರ್.1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲೇ ಮೋದಿ ಚೀನಾ ಪ್ರವಾಸ ವಿಶ್ವದ ಗಮನ ಸೆಳೆದಿದೆ.
ವಿದೇಶಾಂಗ ಸಚಿವ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಪ್ರಧಾನಿ ಮೋದಿ ಅವರು ಜಪಾನ್ ಮತ್ತು ನಂತರ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2020ರ ಗಾಲ್ವಾನ್ ಕಣಿವೆ ಘರ್ಷಣೆ ಬಳಿಕ ಕಹಿಯಾಗಿದ್ದ ಭಾರತ-ಚೀನಾ ನಡುವಿನ ಸಂಬಂಧ ಇದೀಗ ಸಿಹಿಯಾಗಲು ಪ್ರಾರಂಭವಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ ಅಂತ್ಯದಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‍ಗೆ ಭೇಟಿ ನೀಡಬಹುದು. ಇದರ ನಂತರ, ಪ್ರಧಾನಿ ಶಾಂಘೈ ಸಹಕಾರ ಸಂಸ್ಥೆನಲ್ಲಿ ಭಾಗವಹಿಸಲು ಚೀನಾಕ್ಕೂ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.
ಮೋದಿ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷರು ಸೇರಿದಂತೆ ಇತರ ಎಸ್‍ಸಿಒ ನಾಯಕರನ್ನು ಸಹ ಭೇಟಿಯಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…