ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಸೆಪ್ಟೆಂಬರ್.13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂನಿಂದ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಅಲ್ಲಿ 51.38 ಕಿ.ಮೀ ಉದ್ದದ ಹೊಸ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ.
ಮಿಜೋರಾಂನಲ್ಲಿ ತಮ್ಮ ಕಾರ್ಯಕ್ರಮವನ್ನು ಮುಗಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ವಿಮಾನದಲ್ಲಿ ತೆರಳುವ ನಿರೀಕ್ಷೆಯಿದೆ.
ಮೇ 2023ರಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲದ್ದ ನಂತರ ಇದು ಅವರ ಮೊದಲ ರಾಜ್ಯ ಭೇಟಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಮಿಜೋರಾಂ ಅಧಿಕಾರಿಗಳು ಹೇಳಿದರೆ, ಇಂಫಾಲ್ ಅಧಿಕಾರಿಗಳು ಭೇಟಿಯ ದೃಢೀಕರಣವನ್ನು ಇನ್ನೂ ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ.





