ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಏರಿಕೆ ಬೆನ್ನಲ್ಲೇ ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಾ ಪ್ರವಾಸ ಕೈಗೊಂಡಿದ್ದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ವಿಶ್ವಸಂಸ್ಥೆ ಸಾಮಾನ್ಯ ಸಭೆ ಸೆಪ್ಟೆಂಬರ್.9ರಂದು ಪ್ರಾರಂಭವಾಗಲಿದ್ದು, ರಾಷ್ಟ್ರ ಹಾಗೂ ಸರ್ಕಾರದ ಮುಖ್ಯಸ್ಥರ ವಾರ್ಷಿಕ ಸಭೆ ಸೆಪ್ಟೆಂಬರ್ 23-29ರವರೆಗೆ ನಡೆಯಲಿದೆ.
ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸುವುದು ಅವರ ಸಂಭಾವ್ಯ ಭೇಟಿಯ ಉದ್ದೇಶವಾಗಿದೆ. ಆದರೂ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸುವುದು ಮತ್ತು ಎರಡೂ ದೇಶಗಳ ನಡುವಿನ ಸಂಬಂಧ ಹದಗೆಡಲು ಕಾರಣವಾಗಿರುವ ವ್ಯಾಪಾರ ಮತ್ತು ಸುಂಕದ ಸಮಸ್ಯೆಗಳನ್ನು ಪರಿಹರಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ವರದಿ ಮಾಡಲಾಗಿದೆ.
ಇನ್ನು ಮಾಹಿತಿಯ ಪ್ರಕಾರ ರಷ್ಯಾದ ತೈಲವನ್ನು ಖರೀದಿಸುವುದನ್ನು ಮುಂದುವರಿಸುವುದಕ್ಕಾಗಿ ನವದೆಹಲಿಗೆ ದಂಡ ವಿಧಿಸಲು ಟ್ರಂಪ್ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ಸುಂಕವನ್ನು ಘೋಷಿಸಿದ ಕೆಲವು ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅಮೇರಿಕಾಗೆ ಭೇಟಿ ನೀಡುವ ಸಾಧ್ಯತೆಯ ಸುದ್ದಿ ಬಂದಿದೆ.





