ನವದೆಹಲಿ: ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್‌ಪೋರ್ಟ್‌ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮಿಸಿದ್ದಾರೆ. ಪುಟಿನ್‌ರಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ನೀಡಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದ ವೇಳೆ ಪ್ರಧಾನಿ ಮೋದಿ ಖುದ್ದು ವಿಮಾನ ನಿಲ್ದಾಣಕ್ಕೆ ಹೋಗಿ ಸ್ವಾಗತಿಸಿದ್ದಾರೆ.
ಪುಟಿನ್ ಎರಡು ದಿನಗಳ ಭಾರತ ಪ್ರವಾಸದಲ್ಲಿದ್ದು, ನಾಳೆ ದೆಹಲಿಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲಿದ್ದಾರೆ.
ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ ನಡುವಿನ ಕಾರ್ಯತಂತ್ರದ ಸಂಬಂಧಗಳಲ್ಲಿ ಹೊಸ ಹಂತದ ಸುಧಾರಣೆ ತರಲಿದೆ.





