ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆ ಬರಲಿದ್ದು, ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ.
ಪ್ರಧಾನಿ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.





