ದೇಶ- ವಿದೇಶ

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ: 3 ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

ಉಡುಪಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಮಠಕ್ಕೆ ಆಗಮಿಸಲಿದ್ದು, ಕನಕದಾಸರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆ ಬರಲಿದ್ದು, ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ.

ಪ್ರಧಾನಿ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago