ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ ಫೋಗಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿನೇಶ್ ಫೋಗಟ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್ಸ್ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು ಇದು ನಮ್ಮ ದೇಶದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಮೋದಿ ಟ್ತೀಟ್ ಮೂಲಕ ಅಭಿನಂದಿಸಿದ್ದಾರೆ.
ಫೋಗಟ್ ಅವರು 50 ಕೆಜಿ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ಸ್ ಪ್ರವೇಶಿಸಿ ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣಕ್ಕೆ ಅವರನ್ನು ಅನರ್ಹಗೊಳಿಸಿದ್ದು, ಕ್ರೀಡಾಭಿಮಾನಿಗಳಿಗೆ ಬೇಸರ ತಂದಿತು. ಮತ್ತು ವಿನೇಶ್ ಫೋಗಟ್ ಕನಿಷ್ಠ ಬೆಳ್ಳಿ ಪದಕ ನೀಡಬೇಕು ಎಂದು ಮನವಿಕೂಡ ಮಾಡಿದ್ದರು. ಈ ಮನವಿಯನ್ನು ಸಿಎಎಸ್ ತಿರಸ್ಕರಿಸಿತ್ತು. ಈ ಸಂದರ್ಭದಲ್ಲಿ ವಿನೇಶ್ ಪರ ಅಭಿಯಾನ ಆರಂಭಿಸಿದ್ದರು̤
ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ವಿನೇಶ್ ಕುಸ್ತಿ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ನಮಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರದರ್ಶನದ ಕುರಿತು, ನಿನ್ನೆ ದೆಹಲಿಯ ಅವರ ನಿವಾಸದಲ್ಲಿ ಭಾರತೀಯ ಒಲಿಂಪಿಕ್ ತಂಡದೊಂದಿಗೆ ಸಂವಾದ ನಡೆಸುವಾಗ ವಿನೇಶ್ ಸಾಧನೆಯನ್ನು ಕೊಂಡಾಡಿದ್ದಾರೆ.



