ದೇಶ- ವಿದೇಶ

ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೇಶ್‌ ಪ್ರದರ್ಶನದ ಬಗ್ಗೆ ಅತ್ಯಂತ ಹೆಮ್ಮೆಯಿದೆ: ಪ್ರಧಾನಿ ಮೋದಿ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿಸಿ ವಾಪಸ್ ಆಗಿರುವ ಕ್ರೀಡಾಪಟುಗಳೊಂದಿಗೆ ನಿನ್ನೆ ಸ್ವಾತಂತ್ರ್ಯ ದಿನದಂದು ಮಾತುಕತೆ ನೆಡೆಸಿದ ಮೋದಿ ವಿನೇಶ್‌ ಫೋಗಟ್ ಸಾಧನೆಗಳನ್ನು ಹೊಗಳಿದ್ದಾರೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಲು ಪ್ರಯತ್ನಿಸಿ ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾದ ವಿನೇಶ್ ಫೋಗಟ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿನೇಶ್ ಫೋಗಟ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಫೈನಲ್ಸ್‌ ಪ್ರವೇಶಿಸಿದ ಭಾರತದ ಮೊದಲ ಕುಸ್ತಿಪಟು ಎನ್ನುವ ಖ್ಯಾತಿಗೆ ಪಾತ್ರರಾಗಿದ್ದರು ಇದು ನಮ್ಮ ದೇಶದ ಪಾಲಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಮೋದಿ ಟ್ತೀಟ್ ಮೂಲಕ ಅಭಿನಂದಿಸಿದ್ದಾರೆ.

ಫೋಗಟ್ ಅವರು 50 ಕೆಜಿ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ಸ್ ಪ್ರವೇಶಿಸಿ ಕೇವಲ 100 ಗ್ರಾಂ ತೂಕ ಹೆಚ್ಚಾದ ಕಾರಣಕ್ಕೆ ಅವರನ್ನು ಅನರ್ಹಗೊಳಿಸಿದ್ದು, ಕ್ರೀಡಾಭಿಮಾನಿಗಳಿಗೆ ಬೇಸರ ತಂದಿತು. ಮತ್ತು ವಿನೇಶ್ ಫೋಗಟ್ ಕನಿಷ್ಠ ಬೆಳ್ಳಿ ಪದಕ ನೀಡಬೇಕು ಎಂದು ಮನವಿಕೂಡ ಮಾಡಿದ್ದರು. ಈ ಮನವಿಯನ್ನು ಸಿಎಎಸ್ ತಿರಸ್ಕರಿಸಿತ್ತು. ಈ ಸಂದರ್ಭದಲ್ಲಿ ವಿನೇಶ್ ಪರ ಅಭಿಯಾನ ಆರಂಭಿಸಿದ್ದರು̤

ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವಿನೇಶ್ ಕುಸ್ತಿ ಫೈನಲ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ನಮಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರದರ್ಶನದ ಕುರಿತು, ನಿನ್ನೆ ದೆಹಲಿಯ ಅವರ ನಿವಾಸದಲ್ಲಿ ಭಾರತೀಯ ಒಲಿಂಪಿಕ್ ತಂಡದೊಂದಿಗೆ ಸಂವಾದ ನಡೆಸುವಾಗ ವಿನೇಶ್‌ ಸಾಧನೆಯನ್ನು ಕೊಂಡಾಡಿದ್ದಾರೆ.

https://x.com/PTI_News/status/1824327034492915968

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

15 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

60 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago