ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರು. ದಿನದಿಂದ ದಿನಕ್ಕೆ ಅವರ ವರ್ಚಸ್ಸು ಹೆಚ್ಚುತ್ತಲೇ ಇದೆ. ಪ್ರಧಾನಿ ಆದ ಬಳಿಕ ವಿಶ್ವದ ಜನಪ್ರಿಯ ನಾಯಕರಲ್ಲಿ ಅವರು ಒಬ್ಬರಾಗಿದ್ದು, ಇದೀಗ ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಹೊಸದೊಂದು ಮೈಲಿಗಲ್ಲು ಸಾಧಿಸಿದ್ದಾರೆ. ಎಕ್ಸ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಈ ಮೂಲಕ ವಿಶ್ವ ನಾಯಕರಾಗಿ ಮೋದಿ ಹೊರಹೊಮ್ಮಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಎಕ್ಸ್‌ನಲ್ಲಿ ನೂರು ಮಿಲಿಯನ್ ಈ ರೋಮಾಂಚನ ಮಾಧ್ಯಮದಲ್ಲಿರುವುದಕ್ಕೆ ಸಂತೋಷವಾಗಿದೆ. ಮೆಚ್ಚುಗೆ, ನಿರ್ಧಾರ, ಚರ್ಚೆ, ಒಳನೋಟ, ಜನರ ಆಶೀರ್ವಾದ, ರಚನಾತ್ಮಕ ಟೀಕೆ ಇತ್ಯಾದಿ. ಭವಿಷ್ಯದಲ್ಲೂ ಅಷ್ಟೇ ಆಸಕ್ತಿದಾಯಕ ಸಮಯವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ಎಕ್ಸ್‌ನಲ್ಲಿ ಪ್ರಧಾನಿ ಮೋದಿಯವರ ಜನಪ್ರಿಯತೆ ಕಂಡು ವಿಶ್ವ ನಾಯಕರು ಸೋಷಿಯಲ್ ಮೀಡಿಯಾದಲ್ಲಿ ಮೋದಿಯವರೊಂದಿಗೆ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಏಕೆಂದರೆ ಅವರೊಂದಿಗೆ ಸಂಪರ್ಕ ಸಾಧಿಸುವುದರಿಂದ ಅವರ ಸ್ವಂತ ಫಾಲೋವರ್ಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.
ಈ ಎಲ್ಲಾ ಬೆಳವಣಿಗೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವ ನಾಯಕ ಎಂಬುದಾಗಿ ಮತ್ತೊಮ್ಮೆ ಪ್ರೂವ್ ಮಾಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…