ನವದೆಹಲಿ: ಉತ್ತರ ಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಸಂಪರ್ಕವನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಚೆನ್ನೈ ಸೆಂಟ್ರಲ್‌ನಿಂದ ನಾಗರ್‌ಕೋಯಿಲ್, ಮಧುರೈನಿಂದ ಬೆಂಗಳೂರು ಕಂಟೋನ್ಮೆಂಟ್ ಹಾಗೂ ಮೀರತ್ ಸಿಟಿ-ಲಕ್ನೋ ಸಂಪರ್ಕಿಸುವ ರೈಲುಗಳನ್ನು ಉದ್ಘಾಟಿಸಿದರು.
ಈ ವಂದೇ ಭಾರತ್ ರೈಲು ಸೇವೆಯು ಯಾತ್ರಾರ್ಥಿಗಳಿಗೆ ಮೀನಾಕ್ಷಿ ಅಮ್ಮನ ದೇವಸ್ಥಾನ, ಮಧುರೈ ಮತ್ತು ಕುಮಾರಿ ಅಮ್ಮನ್ ದೇವಸ್ಥಾನ, ಕನ್ಯಾಕುಮಾರಿಗೆ ಪ್ರಯಾಣಿಸಲು ಅನುಕೂಲವಾಗುತ್ತದೆ.
ಈ ವಂದೇ ಭಾರತ್ ರೈಲು ಸೇವೆಯಿಂದ ಜನರು ಯಾತ್ರಾ ಸ್ಥಳಗಳಿಗೆ ಸಂಚರಿಸಿ ಧಾರ್ಮಿಕ ಪ್ರವಾಸೋದ್ಯಮ ಉತ್ತೇಜಿಸುವ ನಿರೀಕ್ಷೆಯಿದೆ. ಹಾಗಾಗಿ ಪ್ಲಾನ್ ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 3 ಹೊಸ ವಂದೇ ಭಾರತ್ ರೈಲು ಸೇವೆಗಳಿಗೆ ಚಾಲನೆ ನೀಡಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…