ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಎಐಡಿಎಂಕೆ ಪಕ್ಷವನ್ನು ಟೀಕಿಸುವ ಭರದಲಲಿ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ. ಅಲ್ಲದೇ ಖರ್ಗೆ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಯೂಟರ್ನ್ ಹೊಡೆದ ಖರ್ಗೆ ಅವರು, ಪ್ರಧಾನಿ ತಮ್ಮ ವಿರೋಧಿಗಳನ್ನು ಬೆದರಿಸುತ್ತಾರೆ. ಭಯೋತ್ಪಾದಿಸುತ್ತಾರೆ. ಆ ಅರ್ಥದಲ್ಲಿ ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ.





