Mysore
29
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಆಯುಷ್ಮಾನ್‌ ಭಾರತ್‌ ಯೋಜನೆ ಬಗ್ಗೆ ಖುಷಿ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್‌ ಭಾರತ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಖುಷಿ ಹಂಚಿಕೊಂಡಿದ್ದಾರೆ.

70 ವರ್ಷ ಮೇಲ್ಪಟ್ಟ ಎಲ್ಲರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

70 ವರ್ಷ ಮೇಲ್ಪಟ್ಟ ಜನರಿಗೆ ಆಯುಷ್ಮಾನ್‌ ವಯ ವಂದನಾ ಕಾರ್ಡ್‌ ನೀಡಲಾಗುವುದು ಎಂದು ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು ಈ ಯೋಜನೆಗೆ ಪಶ್ಚಿಮ ಬಂಗಾಳ ಹಾಗೂ ದೆಹಲಿ ಸರ್ಕಾರಗಳು ಸೇರ್ಪಡೆಯಾಗದ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ಹಿರಿಯ ನಾಗರಿಕರಿಗೆ ಕ್ಷಮೆಯಾಚಿಸಿದ್ದಾರೆ.

ಇನ್ನು ಈ ಯೋಜನೆಯಿಂದ ಹಿರಿಯ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದ್ದು, ಆಸ್ಪತ್ರೆಗೆ ಹೆಚ್ಚು ಹೆಚ್ಚು ಹಣ ಪಾವತಿಸುವ ಯೋಚನೆ ದೂರಾಗಿದೆ.

ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!