ಭೂಪಾಲ್: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ದಿನದಂದೇ ಅವರ ಬಹುದೊಡ್ಡ ಕನಸನ್ನು ಈಡೇರಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ.
ಮಧ್ಯಪ್ರದೇಶದ ಖಜ್ರಾಹೋದಲ್ಲಿ ಕೆನ್-ಬೆಟ್ಟಾ ನದಿಗಳ ಜೋಡಣೆಗೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರೆವೇರಿಸುವ ಮೂಲಕ ದೇಶದಲ್ಲಿ ಮೊದಲ ಬಾರಿಗೆ ನದಿಗಳ ಜೋಡಣೆಗೆ ಮುಂದಾಗಿದ್ದಾರೆ.
ಕಳೆದ 2014ರಲ್ಲಿ ಮೊದಲ ಬಾರಿಗೆ ಮೋದಿ ಅವರು ಪ್ರಧಾನಿ ಆದಾಗ ವಾಜಪೇಯಿ ಅವರ ಕನಸನ್ನು ಈಡೇರಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಅಡೆತಡೆಗಳನ್ನು ನಿವಾರಿಸಿದರು.
ಅಂತಿಮವಾಗಿ ನದಿಗಳ ಜೋಡಣೆಗಿದ್ದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿದ್ದು, ಈಗ ಕೇಂದ್ರದಿಂದ ಅನುದಾನವೂ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಾ.ಮೋಹನ್ ಯಾದವ್, ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ, ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಸಚಿವ ಪ್ರಹ್ಲಾದ್ ಪಟೇಲ್, ಜಲಸಂಪನ್ಮೂಲ ಸಚಿವೆ ತುಳಸಿ ಸಿಲಾವತ್, ಕೃಷಿ ಸಚಿವ ಇಂದಲ್ ಸಿಂಗ್ ಕಂಸಾನಾ, ಕೇಂದ್ರ ಕೃಷಿ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾಗಿಯಾಗಿದ್ದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…