ವಾರಣಾಸಿ: ಇಂದು ( ಜೂನ್ 18 ) ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 9.26 ಕೋಟಿ ರೈತರಿಗೆ ಒಟ್ಟು 20 ಸಾವಿರ ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.
ದೇಶದ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಹಣಕಾಸಿನ ನೆರವು ನೀಡಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಯಡಿಯಲ್ಲಿ 17ನೇ ಕಂತನ್ನು ಈ ಬಾರಿ ಬಿಡುಗಡೆ ಮಾಡಲಾಗಿದೆ. ಸದ್ಯ ಎಲ್ಲೆಡೆ ಮುಂಗಾರು ಆಗಮನವಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಖರೀದಿಸಲು ಈ ಹಣ ರೈತರಿಗೆ ನೆರವಾಗಲಿದೆ.
ಅಲ್ಲದೇ 30 ಸಾವಿರಕ್ಕೂ ಹೆಚ್ಚಿನ ಸ್ವ ಸಹಾಯ ಗುಂಪುಗಳಿಗೆ ʼಕೃಷಿ ಸಖಿʼ ಹೆಸರಿನ ತರಬೇತಿ ಪತ್ರವನ್ನು ವಿತರಿಸಲಾಯಿತು. ದೇಶಾದ್ಯಂತ ಇರುವ ಕೃಷಿ ಸಹಾಯಕ ಮಹಿಳೆಯರ ಗುಂಪಿಗೆ ಈ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…