ನವದೆಹಲಿ : ನವೆಂಬರ್ ೨೪ ರಂದು ನಾವು ಸಂವಿಧಾನ ದಿನ ಆಚರಿಸಲು ನಿರ್ಧರಿಸಿದ್ದಾಗ ಈಗ ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುತ್ತಿರುವವರು ಅದನ್ನ ವಿರೋಧಿಸಿದ್ದರು ಎಂದು ರಾಜ್ಯ ಸಭೆಯಲ್ಲೂ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಪ್ರಧಾನಿ, ಸಂವಿಧಾನದ ಆಶಯ ನಮಗೆ ಅಮೂಲ್ಯ. ಸಂವಿಧಾನದ ಕಾರಣದಿಂದ ನನಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿತು. ಸಂವಿಧಾನವು ನಮಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ. ನಮ್ಮ ಸರ್ಕಾರ ೧೦ ವರ್ಷ ಪೂರೈಸಿದೆ. ಇನ್ನೂ ೨೦ ವರ್ಷ ಪೂರೈಸಬೇಕಿದೆ ಎಂದರು
ಅಲ್ಲದೆ ನಿರಂತರ ಸೇವೆಯೊಂದಿಗೆ ಮಾಡಿದ ಕೆಲಸವನ್ನು ಸಾರ್ವಜನಿಕರು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ.ದೇಶದ ಜನತೆ ಅಪಪ್ರಚಾರವನ್ನು ಸೋಲಿಸಿದ್ದಾರೆ. ವಿಶ್ವಾಸ ರಾಜಕಾರಣಕ್ಕೆ ಗೆಲುವಿನ ಮುದ್ರೆ ಹಾಕಿ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಆದರೆ ಪ್ರತಿಪಕ್ಷಗಳು ದೇಶದ ಜನರ ನಿರ್ಧಾರಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ವಿರೋಧ ಪಕ್ಷಗಳು ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರು. ರಾಜ್ಯಸಭೆಯನ್ನ ಮುಂದೂಡಿ, ಸುಳ್ಳು ಹೇಳೋದನ್ನ ನಿಲ್ಲಿಸಿ ಎಂದು ಒತ್ತಾಯಿಸಿ ರಾಜ್ಯಸಭೆಯಿಂದ ಹೊರನಡೆದರು.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…