ದೇಶ- ವಿದೇಶ

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಶುರು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಬಳಿಕ ಬುಧವಾರ ಆಸ್ಟ್ರಿಯಾಗೆ ತೆರಳಿ ಗುರುವಾರದ ವರೆಗೂ ಅಲ್ಲೆ ಇರಲಿದ್ದಾರೆ.

ಇನ್ನು ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಇಂದು ನರೇಂದ್ರ ಮೋದಿ ಅವರಿಗೆ ಔತಣ ಕೂಡ ಏರ್ಪಡಿಸಿದ್ದಾರೆ. ನಾಳೆ ಶೃಂಗಾಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

೨೨ ನೇ ಭಾರತ –ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವ್ಲಾಡಿಮಿರ್‌ ಪುಟಿನ್‌ ಅವರ ವಿಶೇಷ ಆಹ್ವಾನದೊಂದಿಗೆ ಪ್ರಧಾನಿ ಇಂದು ರಷ್ಯಾಗೆ ಭೇಟಿ ಕೊಟ್ಟಿದ್ದು, ಉಭಯ ದೇಶಗಳ ನಡುವಿನ ಉತ್ತಮ ಸಂಬಂಧವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗಲು ಇದು ನಿಜಕ್ಕೂ ಸಹಕಾರಿಯಾಗಲಿದೆ ಎಂದರೆ ತಪ್ಪಾಗಲಾರದು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

1 hour ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

4 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

8 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

13 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

13 hours ago