Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಆಗಸ್ಟ್.‌23ರಂದು ಉಕ್ರೇನ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌23ರಂದು ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಈ ಉಕ್ರೇನ್‌ ಭೇಟಿಯು ಯುದ್ಧ ಪೀಡಿತ ರಾಷ್ಟ್ರದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಮಾರ್ಗೋಪಾಯವನ್ನು ಕಂಡುಕೊಳ್ಳುವುದಾಗಿದೆ ಎಂದು ತಿಳಿಸಿದ್ದಾರೆ.

ಉಕ್ರೇನ್‌ಗೆ ಭೇಟಿ ನೀಡಿದಾಗ ಪ್ರಧಾನಿ ಮೋದಿ ಅವರು, ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಲಿದ್ದಾರೆ.

ಪ್ರಧಾನಿ ಮೋದಿ ಉಕ್ರೇನ್‌ ಭೇಟಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ಪಶ್ಚಿಮ ವಿಭಾಗದ ಕಾರ್ಯದರ್ಶಿ ತನ್ಮಯಾ ಲಾಲ್‌ ಅವರು, ರಾಜತಾಂತ್ರಿಕತೆ ಹಾಗೂ ಮಾತುಕತೆ ಮೂಲಕ ಉಕ್ರೇನನಲ್ಲಿ ಬಿಕ್ಕಟ್ಟು ಶಮನಕ್ಕೆ ಭಾರತ ಸದಾ ಬೆಂಬಲ ನೀಡಲಿದೆ.

ಭಾರತವು ರಷ್ಯಾ ಮತ್ತು ಉಕ್ರೇನ್‌ನೊಂದಿಗೆ ಸಮಾನ ಸಂಬಂಧವನ್ನು ಹೊಂದಿದೆ. ಉಕ್ರೇನ್‌ ಪ್ರವಾಸಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಪೊಲೆಂಡ್‌ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಪ್ರಧಾನಿ ಮೋದಿ ಅವರು ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಯುದ್ಧದ ತೀವ್ರತೆ ಹೇಗಿರಲಿದೆ ಎಂದು ಜನತೆ ಕಾದು ನೋಡುತ್ತಿದ್ದಾರೆ.

 

 

Tags:
error: Content is protected !!