ನವದೆಹಲಿ: ಇಂದು (ಮೇ.7) ದೇಶಾದ್ಯಂತ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿಯೂ ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರದಾನಿ ಮೋದಿ ಕರೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ, ಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ. ಎಂದು ಕನ್ನಡದಲ್ಲಿಯೇ ಬರೆದುಕೊಂಡಿದ್ದಾರೆ.
ಮೋದಿ ಮತದಾನ: ಇಂದು ಗುಜರಾತ್‌ನ ಎಲ್ಲಾ 25 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಇಂದು ಗುಜರಾತ್‌ನ ಅಹಮದಾಬಾದ್‌ನ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತದಾನ ಮಾಡಿದರು. ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಮತದಾನ ನೆರವೇರಿಸಿದರು.





