ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಹಾಗೂ ಗುರ್ಕೀರತ್ ಮಾನ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, ಮಾಡಿದ್ದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಹಾಗೂ ಗುರ್ಕಿರತ್ ಮಾನ್ ಅವರು, ಸಾಮಾಜಿಕ ಜಾಲತಾಣವಾದ ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಶೇರ್ ಮಾಡಿದ್ದರು.
ವಿಡಿಯೋ ನೋಡುತ್ತಿದ್ದಂತೆ ಮಾಜಿ ಕ್ರಿಕೆಟಿಗರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ನ್ಯಾಷನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಪ್ಲಾಯ್ ಮೆಂಟ್ ಫಾರ್ ಡಿಸೇಬಲ್ಡ್ ಪೀಪಲ್ ಕಾರ್ಯನಿರ್ವಾಹಕ ನಿರ್ದೇಶಕ ಅರ್ಮನ್ ಅಲಿ ಅವರು ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ಹೇಳಿಕೆ ನೀಡಿರುವ ಹರ್ಭಜನ್ ಸಿಂಗ್ ಅವರು, ಯಾರಿಗೂ ಅವಮಾನ ಮಾಡುವ ಉದ್ದೇಶ ಹೊಂದಿರಲಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ.