ದೇಶ- ವಿದೇಶ

ಅಂಗವೈಕಲ್ಯ ಅಣಕಿಸಿದ ಮೂವರು ಮಾಜಿ ಕ್ರಿಕೆಟಿಗರ ವಿರುದ್ಧ ದೂರು ದಾಖಲು

ನವದೆಹಲಿ: ಅಂಗವೈಕಲ್ಯ ಅಣಕಿಸಿ, ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಅಪ್ಲೋಡ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್‌ ಆಟಗಾರರಾದ ಹರ್ಭಜನ್‌ ಸಿಂಗ್‌, ಸುರೇಶ್‌ ರೈನಾ, ಯುವರಾಜ್‌ ಸಿಂಗ್‌ ಹಾಗೂ ಗುರ್ಕೀರತ್‌ ಮಾನ್‌ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಂಗವೈಕಲ್ಯ ಅಣಕಿಸಿದಂತೆ ವಿಡಿಯೋ ಮಾಡಿ, ಮಾಡಿದ್ದ ಮಾಜಿ ಕ್ರಿಕೆಟಿಗರಾದ ಹರ್ಭಜನ್‌ ಸಿಂಗ್‌, ಸುರೇಶ್‌ ರೈನಾ, ಯುವರಾಜ್‌ ಸಿಂಗ್‌ ಹಾಗೂ ಗುರ್ಕಿರತ್‌ ಮಾನ್‌ ಅವರು, ಸಾಮಾಜಿಕ ಜಾಲತಾಣವಾದ ಇನ್ಸ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು.

ವಿಡಿಯೋ ನೋಡುತ್ತಿದ್ದಂತೆ ಮಾಜಿ ಕ್ರಿಕೆಟಿಗರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಬಗ್ಗೆ ನ್ಯಾಷನಲ್‌ ಸೆಂಟರ್‌ ಫಾರ್‌ ಪ್ರೊಮೋಷನ್‌ ಆಫ್‌ ಎಂಪ್ಲಾಯ್‌ ಮೆಂಟ್‌ ಫಾರ್‌ ಡಿಸೇಬಲ್ಡ್‌ ಪೀಪಲ್‌ ಕಾರ್ಯನಿರ್ವಾಹಕ ನಿರ್ದೇಶಕ ಅರ್ಮನ್‌ ಅಲಿ ಅವರು ಠಾಣೆಗೆ ದೂರು ಸಲ್ಲಿಸಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಹೇಳಿಕೆ ನೀಡಿರುವ ಹರ್ಭಜನ್‌ ಸಿಂಗ್‌ ಅವರು, ಯಾರಿಗೂ ಅವಮಾನ ಮಾಡುವ ಉದ್ದೇಶ ಹೊಂದಿರಲಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

6 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago