Mysore
26
scattered clouds

Social Media

ಬುಧವಾರ, 15 ಜನವರಿ 2025
Light
Dark

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್‌ ಸೇವೆಯಿಂದ ವಜಾಗೊಳಿಸುವಂತೆ ಕೇಂದ್ರ ಸರ್ಕಾರ ಇಂದು ಆದೇಶಿಸಿದೆ.

ಭಾರತೀಯ ಆಡಳಿತ ಸೇವೆಗೆ ಸೇರಲು ಇತರ ಹಿಂದುಳಿದ ವರ್ಗಗಳ ಮತ್ತು ಅಂಗವಿಕಲ ಕೋಟಾದಡಿ ನಕಲಿ ದಾಖಲೆಗಳನ್ನ ನೀಡಿ ವಂಚಿಸಿರುವ ಆರೋಪ ಪೂಜಾ ಅವರ ಮೇಲಿದೆ. ಆದರೆ, ಈ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ.

ಐಎಎಸ್‌ ನಿಯಮಗಳು,1954ರ ನಿಯಮ 12ರ ಅಡಿಯಲ್ಲಿ ಪೂಜಾ ಅವರನ್ನು ಭಾರತೀಯ ಆಡಳಿತ ಸೇವೆಯಿಂದ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಆದೇಶಿಸಿದೆ.

ಪೂಜಾ ಅವರು ಮಹಾರಾಷ್ಟ್ರ ಕೇಡರ್‌ನಲ್ಲಿ ಪ್ರೊಬೇಷನರಿ ಐಎಎಸ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Tags: