ನವದೆಹಲಿ: 2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎನ್ನಲಾಗಿದೆ.
2036ರ ವೇಳೆಗೆ ಭಾರತದ ಜನಸಂಖ್ಯೆ ಸುಮಾರು 152.2 ಕೋಟಿ ತಲುಪುವ ನಿರೀಕ್ಷೆಯಿದೆ. 2011ರಲ್ಲಿ ಶೇಕಡಾ 48.5ಕ್ಕೆ ಹೋಲಿಸಿದರೆ ಶೇಕಡಾ 48.8ರಷ್ಟಿದ್ದು ಮಹಿಳಾ ಶೇಕಡಾವಾರು ಸ್ವಲ್ಪ ಸುಧಾರಿಸಿದೆ. ಈ ಬಗ್ಗೆ ಕೇಂದ್ರ ಸಚಿವಾಲಯ ಮಹತ್ವದ ಮಾಹಿತಿಯನ್ನು ಹೊರ ತಂದಿದೆ.
15 ವರ್ಷದೊಳಗಿನ ವ್ಯಕ್ತಿಗಳ ಅನುಪಾತವು 2011ರಿಂದ 2036ರವರೆಗೆ ಕಡಿಮೆಯಾಗುವ ನಿರೀಕ್ಷೆಯಿದೆ. ಇದು ಫಲವತ್ತತೆ ಕ್ಷೀಣಿಸುತ್ತಿರುವ ಕಾರಣದಿಂದಾಗಿರಬಹುದು ಎಂದು ಹೇಳಿದೆ.
ವುಮೆನ್ ಅಂಡ್ ಮನೆ ಇನ್ ಇಂಡಿಯಾ ವರದಿಯ ಪ್ರಕಾರ ದೇಶದಲ್ಲಿ ಫಲವತ್ತತೆ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 15 ವರ್ಷದೊಳಗಿನವರ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆಯಿದೆ. ಇದಕ್ಕೆ ವಿರುದ್ಧವಾಗಿ 60 ವರ್ಷ ಮೇಲ್ಪಟ್ಟವರ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ.
ಈ ವರದಿಯಲ್ಲಿ ಮಹಿಳೆಯರು ಹಾಗೂ ಪುರುಷರ ಬಗೆಗಿನ ಸಮಗ್ರ ದೃಷ್ಟಿಕೋನವನ್ನು ನೀಡುವುದಾಗಿದ್ದು, ಜನಸಂಖ್ಯೆ, ಶಿಕ್ಷಣ, ಆರೋಗ್ಯ ಬಗ್ಗೆ ನಿರ್ಧಾರ ಕೈಗೊಳ್ಳುವ ಮಾಹಿತಿಯನ್ನು ಒಳಗೊಂಡಿದೆ.
ಈ ಮೂಲಕ 2036ರ ವೇಳೆಗೆ ದೇಶದಲ್ಲಿ ಜನಸಂಖ್ಯೆ 152.2 ಕೋಟಿ ತಲುಪುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…