ದೇಶ- ವಿದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರ ನಾಳೆ(ಡಿ.16) ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸುವುದನ್ನು ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆಯಲ್ಲಿ ಸೋಮವಾರ(ಡಿಸೆಂಬರ್‌.16) ಮಂಡನೆಯಾಗಲಿರುವ ವಿವಿಧ ಮಸೂದೆಗಳಿಗೆ ಅಂಗೀಕಾರ ದೊರೆತ ಬಳಿಕ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಈ ವಾರದ ಕೊನೆಯಲ್ಲಿ  ಮಂಡಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ,  ಸಂವಿಧಾನದ 129ನೇ ತಿದ್ದುಪಡಿ ಮೂಲಕ ಒಂದು ರಾಷ್ಟ್ರ, ಒಂದು ಚುನಾವಣೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಮಂಡಿಸಲು ಪಟ್ಟಿ ಮಾಡಿದೆ ಎಂದು ಹೇಳಲಾಗಿತ್ತು. ಅಲ್ಲದೇ ಈಗಾಗಲೇ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯ ಕರಡು ಪ್ರತಿಯನ್ನು ಸಂಸದರಿಗೆ ನೀಡಿದ್ದು, ನಾಳೆ ಸದನ ಕಲಾಪದಲ್ಲಿ ಈ ಮಸೂದೆ ಮಂಡನೆಯಾಗುತ್ತದೆ ಎಂದು ಹೇಳಲಾಗಿತ್ತು.

ಈ ಮಸೂದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶವನ್ನು ಹೊಂದಿದೆ.

 

 

 

ಅರ್ಚನ ಎಸ್‌ ಎಸ್

Recent Posts

ಕೊಡಗಿನಲ್ಲಿ ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ!

 ಕೊಡಗು: ಇಲ್ಲಿನ ನರಿಯಂದಡ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಚೆಯ್ಯಂಡಾಣೆ ಸಮೀಪದ ಈ ಗ್ರಾಮದಲ್ಲಿ ಶನಿವಾರ…

3 hours ago

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ತಮಿಳುನಾಡು ಕರಾವಳಿಗೆ ಮಳೆ ಮುನ್ಸೂಚನೆ!

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ವಾಯುಭಾರ ಕುಸಿತ ತೀವ್ರಗೊಂಡಿದ್ದು, ಹವಾಮಾನ ವ್ಯವಸ್ಥೆ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.…

4 hours ago

ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ಕಡಿವಾಣ: ₹8.80 ಕೋಟಿ ಅಕ್ಕಿ ಜಪ್ತಿ!

ಬೆಂಗಳೂರು: ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ನಡೆಸಿದ ದಾಳಿಗಳಲ್ಲಿ ಒಂದೇ…

5 hours ago

ಓದುಗರ ಪತ್ರ: ನೆಹರೂ ಸೇವೆ ಸ್ಮರಿಸೋಣ

ರಾಜಕೀಯ ಮುತ್ಸದ್ದಿ, ದೇಶದ ಪ್ರಥಮ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯ ಹೆಸರಿನಲ್ಲಿ ಶನಿವಾರ…

6 hours ago

ಓದುಗರ ಪತ್ರ: ಪ್ರತಿ ನಗರಕ್ಕೂ ಬೇಕಾಗಿದೆ ಕಸ ಸಂಸ್ಕರಣಾ ಘಟಕ

ಸ್ವಚ್ಛತಾ ಪಟ್ಟಿಯಲ್ಲಿ ರಾಜ್ಯದಲ್ಲಿ ಮೈಸೂರು ಮಕುಟ ಧರಿಸಿರುವುದು ಹೆಮ್ಮೆಯ ಸಂಗತಿಯಾದರೂ ಶೇ.೯೦ಕ್ಕೂ ಹೆಚ್ಚು ನಗರಗಳಲ್ಲಿ ಇಂದಿಗೂ ಕಸದ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು…

6 hours ago

ಓದುಗರ ಪತ್ರ: ಮೋದಿಯವರ ಹೃದಯ ವೈಶಾಲ್ಯತೆಯೂ ಹಾಸ್ಯಪ್ರಜ್ಞೆಯೂ

ಪ್ರಧಾನ ಮಂತ್ರಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನ ಗುಲಾಬಿ ಮಾರ್ಗದ ಉದ್ಘಾಟನೆ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟದ…

6 hours ago