Mysore
30
broken clouds

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಹಾಗೂ ಮನೆಗಳು ತೀವ್ರ ಹಾನಿಗೊಳಗಾಗಿವೆ.

ಪ್ರಬಲ ಭೂಕಂಪಕ್ಕೆ ಕಟ್ಟಡಗಳು ಕುಸಿದು ಬೀಳುತ್ತಿದ್ದಂತೆ ಜನರು ಭಯಭೀತರಾಗಿ ಓಡುತ್ತಿರುವ ದೃಶ್ಯದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿವೆ.

ಭೂಕಂಪದ ನಂತರ ಸುನಾಮಿ ಅಲೆಗಳು ಏಳಬಹುದಾದ ಸಾಧ್ಯತೆಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಲಾಗಿತ್ತು.

 

Tags:
error: Content is protected !!