ಮನಿಲಾ: ಫಿಲಿಫೈನ್ಸ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಭೂಕಂಪದ ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿದ್ದು, ಫಿಲಿಫೈನ್ಸ್ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಣೆ ಮಾಡಲಾಗಿದೆ.
ಭೂಕಂಪದ ಸುಮಾರು ಎರಡು ಗಂಟೆಗಳ ನಂತರ 6.1 ತೀವ್ರತೆಯ ಪ್ರಬಲ ಭೂಕಂಪನ ಕೂಡ ಸಂಭವಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಈ ನಡುವೆ ಅಧಿಕಾರಿಗಳು ಹಾನಿಗೊಳಗಾದ ಕಟ್ಟಡಗಳ ಸಮೀಪ ಹೋಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.




