Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್-ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ ಎಂದು ಹೇಳಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ ಎಂದರು.

ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಏನು ಸರಿ, ಏನು ಸರಿಯಿಲ್ಲ ಎಂದು ಅವರೇ ಹೇಳುತ್ತಾರೆ. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ. ಜೆಡಿಎಸ್‌ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್‌, ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಇದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.

Tags:
error: Content is protected !!