ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಮ್ಮ ಪ್ರತಿಕ್ರಿಯೆಗಿಂತ ಜೆಡಿಎಸ್-ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ ಎಂದು ಹೇಳಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿರುವ ಬಗ್ಗೆ ನಾವು ಮಾತನಾಡಿದರೆ ರಾಜಕೀಯವಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡುವುದು ಬಹುಮುಖ್ಯ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಏನು ಸರಿ, ಏನು ಸರಿಯಿಲ್ಲ ಎಂದು ಅವರೇ ಹೇಳುತ್ತಾರೆ. ಅವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡುವ ಶಕ್ತಿ, ಸಾಮರ್ಥ್ಯ ಇದೆ. ಜೆಡಿಎಸ್ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರು, ಯುವ ಘಟಕದ ಅಧ್ಯಕ್ಷರು ಪ್ರತಿಕ್ರಿಯೆ ನೀಡಲಿ. ನಾವು ಕಾನೂನಿಗೆ ಗೌರವ ಕೊಟ್ಟು, ಅದು ಹೇಳಿದಂತೆ ಕೇಳಿಕೊಂಡು ಬರುತ್ತೇವೆ. ಅಶೋಕ್, ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಇದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು.
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…
ಟೆಹರಾನ್: ಕಳೆದ ಕೆಲ ದಿನಗಳಿಂದ ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್…