Mysore
24
overcast clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಸಂವಿಧಾನವನ್ನು ಗೌರವಿಸುವುದಾದರೆ ಮನುಸ್ಮೃತಿ ಸುಟ್ಟುಹಾಕಿ: ಮೋದಿ, ರಾಗಾಗೆ ಪ್ರಕಾಶ್‌ ಅಂಬೇಡ್ಕರ್‌ ಸವಾಲು

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ ಎಂದು ವಂಚಿತ್‌ ಬಹುಜನ್‌ ಅಘಾಡಿ ಪಕ್ಷದ ಮುಖ್ಯಸ್ಥ ಹಾಗೂ ಡಾ. ಬಿ.ಆರ್‌ ಅಂಬೇಡ್ಕರ್‌ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ಅವರು ಬಹಿರಂಗ ಸವಾಲು ಹಾಕಿದ್ದಾರೆ.

ಪ್ರಕಾಶ್‌ ಅಂಬೇಡ್ಕರ್‌ ಅವರು ತಮ್ಮ ಹೇಳಿಕೆಯಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ನಿಜವಾಗಿಯೂ ಸಂವಿಧಾನದ ಮೇಲೆ ಗೌರವವಿದ್ದರೇ, ಪ್ರೀತಿಸುತ್ತಿದ್ದರೇ ಮನುಸ್ಮೃತಿ ಸುಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್‌ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಪ್ರತಿಪಾದಿಸಿರುವ ತತ್ವಗಳನ್ನು ಭ್ರಷ್ಟಗೊಳಿಸಿದ್ದಾರೆ. ಆ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ಹಾಳು ಮಾಡಲು ಈ ಎರಡೂ ಪಕ್ಷಗಳು ಶ್ರಮಿಸಿವೆ. ಆ ಮೂಲಕ ಸಂವಿಧಾನಕ್ಕೆ ಹಾನಿಯುಂಟು ಮಾಡುತ್ತಿವೆ ಎಂದು ದೂರಿದ್ದಾರೆ.

Tags:
error: Content is protected !!