ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನಿಜವಾಗಿಯೂ ಸಂವಿಧಾನವನ್ನು ಗೌರವಿಸುವುದೇ ಆದಲ್ಲಿ ಮನುಸ್ಮೃತಿ ಪ್ರತಿಕೃತಿಯನ್ನು ಸುಟ್ಟುಹಾಕಿ ಎಂದು ವಂಚಿತ್ ಬಹುಜನ್ ಅಘಾಡಿ ಪಕ್ಷದ ಮುಖ್ಯಸ್ಥ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರು ಬಹಿರಂಗ ಸವಾಲು ಹಾಕಿದ್ದಾರೆ.
ಪ್ರಕಾಶ್ ಅಂಬೇಡ್ಕರ್ ಅವರು ತಮ್ಮ ಹೇಳಿಕೆಯಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್‌ಗೆ ನಿಜವಾಗಿಯೂ ಸಂವಿಧಾನದ ಮೇಲೆ ಗೌರವವಿದ್ದರೇ, ಪ್ರೀತಿಸುತ್ತಿದ್ದರೇ ಮನುಸ್ಮೃತಿ ಸುಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವಗಳನ್ನು ಭ್ರಷ್ಟಗೊಳಿಸಿದ್ದಾರೆ. ಆ ಮೂಲಕ ಸಂವಿಧಾನದ ಮೂಲ ಆಶಯಗಳನ್ನು ಹಾಳು ಮಾಡಲು ಈ ಎರಡೂ ಪಕ್ಷಗಳು ಶ್ರಮಿಸಿವೆ. ಆ ಮೂಲಕ ಸಂವಿಧಾನಕ್ಕೆ ಹಾನಿಯುಂಟು ಮಾಡುತ್ತಿವೆ ಎಂದು ದೂರಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…