ಬಿಹಾರ: ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪರೀಕ್ಷೆ ರದ್ದತಿಗೆ ಅಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಕೈ ಜೋಡಿಸಿ ಪ್ರಶಾಂತ್ ಕಿಶೋರ್ ಅನಿರ್ಧಿಷ್ಟಾವಧಿ ಸತ್ಯಾಗ್ರಹ ಕೈಗೊಂಡಿದ್ದರು.
ಈ ಸಂಬಂಧ ಬಿಹಾರ ಪೊಲೀಸರು ಪ್ರಶಾಂತ್ ಕಿಶೋರ್ ಅವರನ್ನು ಬಂದಿಸಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ನಿರಾಕರಿಸಿರುವ ಅವರು ಪರೀಕ್ಷೆ ರದ್ದತಿಗೆ ಅಮರಣಾಂತ ಉಪವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ತಂತ್ರಗಾರರಾಗಿದ್ದ ಪ್ರಶಾಂತ್ ಕಿಶೋರ್ ಇತ್ತೀಚಿನ ದಿನಗಳಲ್ಲಿ ಜನ್ ಸೂರಜ್ ಪಕ್ಷ ಸ್ಥಾಪನೆಯ ಮೂಲಕ ಪೂರ್ಣಾವಧಿ ರಾಜಕೀಯಕ್ಕೆ ಧುಮುಕಿದ್ದಾರೆ.





