ಜೆರುಸೇಲಂ: ಇರಾನ್ ವಿರುದ್ಧ ಇಸ್ರೇಲ್ ಪೂರ್ವಭಾವಿ ದಾಳಿ ನಡೆಸಿದ್ದು, ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆ ಮಾಡಲಾಗಿದೆ.
ಇರಾನ್‌ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಇಂದು ದಾಳಿ ನಡೆಸಲಾಗಿದೆ. ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಇನ್ನೂ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಇರಾನ್ ಪರಮಾಣು ಯೋಜನೆಯ ಐವರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
ಇದನ್ನೂ ಓದಿ:- ಮಂಗಳೂರು: ಸ್ಪೆಷಲ್ ಆಕ್ಷನ್ ಫೋರ್ಸ್‌ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ
ಸಾವು-ನೋವುಗಳ ಬಗ್ಗೆ ಅಧಿಕೃತ ಮಾಹಿತಿ ಬರಬೇಕಿದ್ದು, ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ.