Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಾಳೆ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

drupadi murmu

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇದನ್ನು ಓದಿ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ದ್ರೌಪತಿ ಮುರ್ಮು ಅವರ ವಾಹನದ ಜೊತೆಗೆ ಬೆಂಗಾವಲು ವಾಹನ ಪಡೆ ಹಾಗೂ ಆಂಬುಲೆನ್ಸ್‌ ಕೂಡ ಇರಲಿದೆ. ಅಯ್ಯಪ್ಪಸ್ವಾಮಿ ದೇವಾಲಯ ಸಾಗುವ ರಸ್ತೆ ಹಾಗೂ ಸಾಂಪ್ರದಾಯಿಕ ಚಾರಣ ಮಾರ್ಗದ ಮೂಲಕ ಅವರು ಸನ್ನಿಧಾನಂ ತಲುಪಲಿದ್ದಾರೆ. ಭದ್ರತಾ ವ್ಯವಸ್ಥೆಗಳನ್ನು ಈಗಾಗಲೇ ಬಲಪಡಿಸಲಾಗಿದೆ.

ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸನ್ನಿಧಾನಂ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಂಜೆ ವೇಳೆಗೆ ಹೆಲಿಕಾಪ್ಟರ್‌ ಮೂಲಕ ತಿರುವನಂತಪುರಂಗೆ ಹಿಂತಿರುಗಲಿದ್ದಾರೆ.

Tags:
error: Content is protected !!