drupadi murmu
ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.
ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇದನ್ನು ಓದಿ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ದ್ರೌಪತಿ ಮುರ್ಮು ಅವರ ವಾಹನದ ಜೊತೆಗೆ ಬೆಂಗಾವಲು ವಾಹನ ಪಡೆ ಹಾಗೂ ಆಂಬುಲೆನ್ಸ್ ಕೂಡ ಇರಲಿದೆ. ಅಯ್ಯಪ್ಪಸ್ವಾಮಿ ದೇವಾಲಯ ಸಾಗುವ ರಸ್ತೆ ಹಾಗೂ ಸಾಂಪ್ರದಾಯಿಕ ಚಾರಣ ಮಾರ್ಗದ ಮೂಲಕ ಅವರು ಸನ್ನಿಧಾನಂ ತಲುಪಲಿದ್ದಾರೆ. ಭದ್ರತಾ ವ್ಯವಸ್ಥೆಗಳನ್ನು ಈಗಾಗಲೇ ಬಲಪಡಿಸಲಾಗಿದೆ.
ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸನ್ನಿಧಾನಂ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಂಜೆ ವೇಳೆಗೆ ಹೆಲಿಕಾಪ್ಟರ್ ಮೂಲಕ ತಿರುವನಂತಪುರಂಗೆ ಹಿಂತಿರುಗಲಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…