Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಮುಂದಿನ ಸಿಜೆಐ ಆಗಿ ನ್ಯಾ.ಸಂಜೀವ್‌ ಖನ್ನಾ ನೇಮಕ: ನ.11ರಂದು ಅಧಿಕಾರ ಸ್ವೀಕಾರ

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್‌ ಖನ್ನಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ.

ನ್ಯಾಯಮೂರ್ತಿ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರು ನವೆಂಬರ್ 11, 2024 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಮೇ 13, 2025 ರವರೆಗೆ ಸುಮಾರು ಏಳು ತಿಂಗಳ ಅವಧಿಗೆ ನೇಮಕ ಮಾಡಲಾಗಿದೆ.

ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಖನ್ನಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟಪತಿಯವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.

65 ವರ್ಷ ವಯಸ್ಸಿನ ನಂತರ ಹುದ್ದೆಯಿಂದ ನಿವೃತ್ತರಾಗಲಿರುವ ಡಿವೈ ಚಂದ್ರಚೂಡ್ ಅವರು ಮಾಡಿದ ಶಿಫಾರಸನ್ನು ಕೊಲಿಜಿಯಂ ಸಮ್ಮತಿಸಿದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದರು.

2019ರ ಜನವರಿ 18 ರಂದು ಜಸ್ಟಿಸ್ ಖನ್ನಾ ಅವರು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.

ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಅವರು ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.

Tags:
error: Content is protected !!