ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್ ಖನ್ನಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ.
ನ್ಯಾಯಮೂರ್ತಿ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರು ನವೆಂಬರ್ 11, 2024 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಮೇ 13, 2025 ರವರೆಗೆ ಸುಮಾರು ಏಳು ತಿಂಗಳ ಅವಧಿಗೆ ನೇಮಕ ಮಾಡಲಾಗಿದೆ.
ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಖನ್ನಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟಪತಿಯವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.
65 ವರ್ಷ ವಯಸ್ಸಿನ ನಂತರ ಹುದ್ದೆಯಿಂದ ನಿವೃತ್ತರಾಗಲಿರುವ ಡಿವೈ ಚಂದ್ರಚೂಡ್ ಅವರು ಮಾಡಿದ ಶಿಫಾರಸನ್ನು ಕೊಲಿಜಿಯಂ ಸಮ್ಮತಿಸಿದೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 8, 2022 ರಂದು ಸಿಜೆಐ ಆಗಿ ಅಧಿಕಾರ ವಹಿಸಿಕೊಂಡಿದ್ದರು.
2019ರ ಜನವರಿ 18 ರಂದು ಜಸ್ಟಿಸ್ ಖನ್ನಾ ಅವರು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.
ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಅವರು ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…