ನವದೆಹಲಿ: ವಿಶ್ವ ಬಾಲ ದಿನದ ಅಂಗವಾಗಿ ದೇಶದ ವಿವಿಧ ರಾಜ್ಯಗಳ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ದೆಹಲಿಯ ಭಾರತ ಮಂಟಪ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ 10 ಬಾಲಕಿಯರು ಹಾಗೂ 7 ಬಾಲಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ನಂತರ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಮುಂದಿನ ಪೀಳಿಗೆಗಳು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಬಾಲ ಪುರಸ್ಕಾರ ಪ್ರಶಸ್ತಿ ಸ್ವೀಕರಿಸುವ ಬಾಲ ಮಕ್ಕಳ ಸಾಧನೆ ಮಹತ್ವದ್ದಾಗಿರುತ್ತದೆ ಎಂದರು.
ಅಸಾಧಾರಣ ಧೈರ್ಯ ಮತ್ತು ಕಲೆ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಪ್ರಶಸ್ತಿಯು ಪದಕ, ಪ್ರಮಾಣಪತ್ರ ಹಾಗೂ ಹೊತ್ತಗೆಯನ್ನು ಒಳಗೊಂಡಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಮಾಹಿತಿ ನೀಡಿದೆ.
ಈ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ವಿಶೇಷವೆನಿಸಿದ್ದು, ಮಕ್ಕಳ ಮುಂದಿನ ಶ್ರೇಯೋಭೀವೃದ್ಧಿ ವತಿಯಿಂದ ಈ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿ.27) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ…
ಕಳೆದ ವಾರ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನವಾಯಿತು. ಮಂಡ್ಯದಲ್ಲಿ ನಡೆದ ಈ ಸಮ್ಮೇಳನದಲ್ಲಿ ಮನರಂಜನೋದ್ಯಮ (ರಂಗಭೂಮಿ,…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ. ಈ…
ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…