ನವದೆಹಲಿ: ಸವದತ್ತಿಯಿಂದ ಶಿವಮೊಗ್ಗದ ಕಡೆ ಬುರುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, 13 ಮಂದಿ ಮೃತರಾಗಿದ್ದಾರೆ. ಇವರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ.
ನಿಂತಿದ್ದ ಲಾರಿಗೆ ಹಿಂಬಿದಿಯಿಂದ ಬಂದ ಟಿಟಿ (ಟೆಂಪೋ ಟ್ರಾವೆಲ್) ಡಿಕ್ಕೆ ಹೊಡೆದ ಪರಿಣಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಮೃತರಾಗಿದ್ದರು. ಓರ್ವ ಬಾಲಕನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಾಷ್ಟ್ರಪತಿ ದ್ರೌಪದಿ ಮುರ್ಮು ಅವರು, “ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಬಸ್ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ಯಾತ್ರಾರ್ಥಿಗಳು ಸಾವನ್ನಪ್ಪಿದ ಸುದ್ದಿ ತಿಳಿದು ದುಃಖವಾಗಿದೆ. ನಾನು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.





