ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ ಕಾಯ್ದೆಗೆ ತಿದ್ದುಪಡಿ ತರುವ 2026ರ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.
ಮಾರ್ಚ್ 24ರಂದು ಲೋಕಸಭೆಯಲ್ಲಿ ಮಾರ್ಚ್ 25ರಂದು ರಾಜ್ಯಸಭೆಯಲ್ಲಿ ಅಂಗೀಕೃತವಾದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.
2019 ಕಾಯ್ದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ವ್ಯಾಖ್ಯಾನ ಅಸ್ಪಷ್ಟವಾಗಿದ್ದು, ನಿಜವಾದ ಸಂತ್ರಸ್ತರನ್ನು ಗುರುತಿಸಿ ಅವರಿಗೆ ಪ್ರಯೋಜನಗಳನ್ನು ನೀಡುವುದು ಕಷ್ಟವಾಗುತ್ತಿತ್ತು. ಹುಟ್ಟಿನಿಂದ ಅನೇಕ ಕಾರಣಗಳಿಂದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಹಕ್ಕುಗಳನ್ನು ರಕ್ಷಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.
ಲೆಸ್ಬಿಯನ್ನರು ಮತ್ತು ಸಲಿಂಗಿಗಳನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯನ್ನು ವಿರೋಧ ಪಕ್ಷಗಳ ಸಂಸದರು ಟೀಕಿಸಿದ್ದರು.





