ದೇಶ- ವಿದೇಶ

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ ಕಾಯ್ದೆಗೆ ತಿದ್ದುಪಡಿ ತರುವ 2026ರ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಮಾರ್ಚ್ 24ರಂದು ಲೋಕಸಭೆಯಲ್ಲಿ ಮಾರ್ಚ್ 25ರಂದು ರಾಜ್ಯಸಭೆಯಲ್ಲಿ ಅಂಗೀಕೃತವಾದ ಈ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

2019 ಕಾಯ್ದೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ವ್ಯಾಖ್ಯಾನ ಅಸ್ಪಷ್ಟವಾಗಿದ್ದು, ನಿಜವಾದ ಸಂತ್ರಸ್ತರನ್ನು ಗುರುತಿಸಿ ಅವರಿಗೆ ಪ್ರಯೋಜನಗಳನ್ನು ನೀಡುವುದು ಕಷ್ಟವಾಗುತ್ತಿತ್ತು. ಹುಟ್ಟಿನಿಂದ ಅನೇಕ ಕಾರಣಗಳಿಂದ ಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಹಕ್ಕುಗಳನ್ನು ರಕ್ಷಿಸುವುದು ಈ ತಿದ್ದುಪಡಿಯ ಮುಖ್ಯ ಉದ್ದೇಶ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.

ಲೆಸ್ಬಿಯನ್ನರು ಮತ್ತು ಸಲಿಂಗಿಗಳನ್ನು ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಯನ್ನು ವಿರೋಧ ಪಕ್ಷಗಳ ಸಂಸದರು ಟೀಕಿಸಿದ್ದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

25 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago