ದೇಶ- ವಿದೇಶ

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ ಕರಾವಳಿಯಲ್ಲಿ ನಡೆದ ಅಂತರಾಷ್ಟ್ರೀಯ ಫ್ಲೀಟ್‌ ರಿವ್ಯೂ 2026ರಲ್ಲಿ ಪ್ರದರ್ಶಿಸಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಭವ್ಯ ನೌಕಾ ಪರೇಡ್‌ ವೀಕ್ಷಣೆ ಮಾಡಿದರು.

ಪ್ರೆಸಿಡೆನ್ಶಿಯಲ್‌ ಯಾಚ್‌ ಆದ ಐಎನ್‌ಎಸ್‌ ಸುಮೇಧಾ ನೌಕೆಯಲ್ಲಿ ಸಾಗಿದ ರಾಷ್ಟ್ರಪತಿಗಳು, ಸಮುದ್ರದಲ್ಲಿ ಲಂಗರು ಹಾಕಿದ್ದ ನೌಕೆಗಳ ಸಾಲನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ರಾಜ್ಯಪಾಲ ಎಸ್.ಅಬ್ದುಲ್‌ ನಜೀರ್‌, ಸಿಎಂ ಚಂದ್ರಬಾಬು ನಾಯ್ಡು, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ದಿನೇಶ್‌ ಕೆ ತ್ರಿಪಾಠಿ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

ಭಾರತೀಯ ನೌಕಾಪಡೆ ಹಾಗೂ ವಿದೇಶಿ ನೌಕಾಪಡೆಗಳಿಗೆ ಸೇರಿದ ಒಟ್ಟು 72 ಮುಂಚೂಣಿ ಯುದ್ಧ ನೌಕೆಗಳು ಹಾಗೂ ಜಲಾಂತರಗಾಮಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದವು.

ಇದು ಸ್ವಾತಂತ್ರ್ಯಾ ನಂತರ ಭಾರತದಲ್ಲಿ ನಡೆದ 13ನೇ ಫ್ಲೀಟ್‌ ರಿವ್ಯೂ ಆಗಿದ್ದು, ಸುಮಾರು 70 ದೇಶಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

3 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

14 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago