Rajya Sabha
ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ.
ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.
2023ರ ಹೈಕೋರ್ಟ್ ಆದೇಶದ ವಿರುದ್ಧವಾಗಿ ಬುಡಕಟ್ಟು ಸಮುದಾಯದ ಮೆರವಣಿಗೆಯೊಂದನ್ನು ಆಯೋಜಿಸಲಾಗಿತ್ತು ಈ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಏರ್ಪಟ್ಟಿತು. ಇಲ್ಲಿಂದ ಸತತವಾಗಿ ಜನಾಂಗೀಯ ಹಿಂಸಾಚಾರ ಶುರುವಾಗಿದೆ.
ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ, ಈ ವರ್ಷ ಫೆಬ್ರವರಿ 13 ರಂದು 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ರಾಜ್ಯದಲ್ಲಿ 1951 ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…