ದೇಶ- ವಿದೇಶ

ಮಣಿಪುರದಲ್ಲಿ ಇನ್ನೂ 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆ: ರಾಜ್ಯಸಭೆ ಅನುಮೋದನೆ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಂಡಿಸಿದ ಪ್ರಸ್ತಾವನೆಯನ್ನ ಸದನವು ಅಂಗೀಕರಿಸಿದೆ.

ಆಗಸ್ಟ್ 13ರಿಂದ ಅನ್ವಯವಾಗುವಂತೆ 6 ತಿಂಗಳ ಕಾಲ ರಾಷ್ಟ್ರಪತಿ ಆಡಳಿತ ವಿಸ್ತರಣೆಯಾಗಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸಂವಿಧಾನದ 356ನೇ ವಿಧಿ ಅನ್ವಯ 2025ರ ಫೆಬ್ರವರಿ 13ರಂದು ರಾಷ್ಟ್ರಪತಿಗಳು ನೀಡಿದ ಸುಗ್ರೀವಾಜ್ಞೆಯನ್ನ 2025ರ ಆಗಸ್ಟ್ 13ರಿಂದ ಆರು ತಿಂಗಳ ಕಾಲ ಮುಂದುವರಿಸಲು ಸದನ ಒಪ್ಪಿಗೆ ನೀಡಬೇಕಿದೆ ಎಂದು ಸದನದಲ್ಲಿ ಮಂಡಿಸಲಾದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

2023ರ ಹೈಕೋರ್ಟ್ ಆದೇಶದ ವಿರುದ್ಧವಾಗಿ ಬುಡಕಟ್ಟು ಸಮುದಾಯದ ಮೆರವಣಿಗೆಯೊಂದನ್ನು ಆಯೋಜಿಸಲಾಗಿತ್ತು ಈ ವೇಳೆ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಏರ್ಪಟ್ಟಿತು. ಇಲ್ಲಿಂದ ಸತತವಾಗಿ ಜನಾಂಗೀಯ ಹಿಂಸಾಚಾರ ಶುರುವಾಗಿದೆ.

ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಅಂದರೆ, ಈ ವರ್ಷ ಫೆಬ್ರವರಿ 13 ರಂದು 6 ತಿಂಗಳ ಕಾಲ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು. ರಾಜ್ಯದಲ್ಲಿ 1951 ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

12 hours ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

15 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

16 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

16 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

23 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

23 hours ago