ಅಧಿಕೃತ ಸಂಸದರಾಗಿ ನಾಳೆ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕೇರಳ ರಾಜ್ಯದ ವಯನಾಡು ಜಿಲ್ಲೆಗೆ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು ನಾಳೆ ಅಧಿಕೃತವಾಗಿ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಇಂದು(ನ.27) ಪ್ರಿಯಾಂಕಾ ಗಾಂಧಿಯವರಿಗೆ ವಯನಾಡು ಕ್ಷೇತ್ರದ ಕಾಂಗ್ರೆಸ್‌ ನಾಯಕರು ಪ್ರಮಾಣ ಪತ್ರವನ್ನು ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ. ಹೀಗಾಗಿ ನಾಳೆ ಲೋಕಸಭೆಯಲ್ಲಿ ಪ್ರಿಯಾಂಕಾ ಅವರು ಸಂಸದರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ವಯನಾಡು ಕ್ಷೇತ್ರದಲ್ಲಿ ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಅವರು, ಕ್ಷೇತ್ರಕ್ಕೆ ಅಧಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ  ನೀಡಿದ್ದಾರೆ.

ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಈ ಕ್ಷೇತ್ರದಲ್ಲಿ ಹಿಂದೆ ಸ್ಪರ್ಧಿಸಿದ್ದ ತಮ್ಮ ಸಹೋದರ ರಾಹುಲ್‌ ಗಾಂಧಿಯವರ ಮತಗಳ ಅಂತರವನ್ನು ಮುರಿದು ಅಧಿಕ ದಾಖಲೆಯ ಮತಗಳನದ್ನು ಪಡೆದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

56 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

1 hour ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago