Mysore
24
overcast clouds

Social Media

ಮಂಗಳವಾರ, 05 ಮೇ 2026
Light
Dark

ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ರಾಷ್ಟ್ರವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ರಾಷ್ಟ್ರ ವ್ಯಾಪಿ ಲಸಿಕೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ರಾಜಸ್ಥಾನದ ಅಜ್ಮಿರ್‍ನಲ್ಲಿ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಆರೋಗ್ಯ ರಕ್ಷಣೆಯನ್ನು ಬಲಪಡಿಸುವ ಗುರಿಯನ್ನು ಈ ಕ್ರಮ ಹೊಂದಿದೆ.ಈ ಕಾರ್ಯಕ್ರಮವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ವರ್ಷ 14 ವರ್ಷ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರನ್ನು ಗುರಿಯಾಗಿರಿಸಿಕೊಳ್ಳುತ್ತದೆ.

ನಿಗದಿತ ಸರ್ಕಾರಿ ಆರೋಗ್ಯ ಸೌಲಭ್ಯಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಆಯುಷ್ಮಾನ್ ಆರೋಗ್ಯ ಮಂದಿರಗಳು (ಪ್ರಾಥಮಿಕ ಆರೋಗ್ಯ ಕೇಂದ್ರಗಳು), ಸಮುದಾಯ ಆರೋಗ್ಯ ಕೇಂದ್ರಗಳು, ಉಪ-ಜಿಲ್ಲಾ ಮತ್ತು ಜಿಲ್ಲಾ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಲಸಿಕೆಯನ್ನು ನಡೆಸಲಾಗುತ್ತದೆ.

 

Tags:
error: Content is protected !!